ChatGPT Image Oct 3, 2026, 08_41_04 PM-modified
GREATER BENGALURU NEWS 9

ಬೆಂಗಳೂರು : ಕೆಎಸ್‌ಆರ್‌ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್‌ ಪ್ರಯಾಣ ದರ ಏರಿಸುವ ಯಾವುದೇ ಚಿಂತನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು.

ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶ್ರೀನಿವಾಸ್ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ( KSRTC Bus Ticket ) ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು ಅಂತ ಹೇಳಿದ್ದಾರೆ. ಆದ್ರೇ ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಮಾಡಿಲ್ಲ ಅಂತ ತಿಳಿಸಿದರು. ರಾಜ್ಯ ಸರ್ಕಾರಕ್ಕೆ ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಅಲ್ಲದೇ ಟಿಕೆಟ್ ದರ ಏರಿಸುವಂತ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಅಂತ ಸ್ಪಷ್ಟ ಪಡಿಸಿದರು.

ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತ್ರ, ರಾಜ್ಯ ಬೊಕ್ಕಸ ಖಾಲಿಯಾಗಿದೆ. ಕೆ ಎಸ್ ಆರ್ ಟಿಸಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ನೀಡಿದಂತ ಟಿಕೆಟ್ ದರವನ್ನು ಸರ್ಕಾರ ಈವರೆಗೆ ಪಾವತಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿತ್ತು.

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಯಾವ ಆರೋಪಕ್ಕೆ ಯಾವ ಶಿಕ್ಷೆ?‌ ಇಲ್ಲಿದೆ ಮಾಹಿತಿ

Leave a Reply

Your email address will not be published. Required fields are marked *