ChatGPT Image Oct 3, 2026, 08_41_04 PM-modified
GREATER BENGALURU NEWS 9

ಧಾರವಾಡ: ಲೋಕಾಯುಕ್ತ ಪೊಲೀಸರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಎಇಇ ಗೋವಿಂದ ಭಜಂತ್ರಿ ಮನೆ ಮೇಲೆ ಮಂಗಳವಾರ ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿ ಬಳಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಬೆಳಗ್ಗೆಯಿಂದ ನಡೆದ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆಯಲ್ಲಿ 2.34 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಧಾರವಾಡ ನಿವಾಸ ಸೇರಿ ಒಟ್ಟು 7 ಕಡೆ ಪರಿಶೀಲನೆ ನಡೆಸಿದ ಅಧಿಕಾರಿಗಳು 2.34 ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ಇದರಲ್ಲಿ 1.85 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 57 ಲಕ್ಷ ರೂ. ಮೌಲ್ಯದ ಸೈಟ್, 1.2 ಕೋಟಿ ರೂ. ಮೌಲ್ಯದ ಮನೆ, 7 ಎಕರೆ ಜಮೀನು ಇರುವ ಸ್ಥಿರಾಸ್ತಿ, 41.11 ಲಕ್ಷ ರೂ. ನಗದು ಸಹಿತ 94.22 ಲಕ್ಷ ರೂ. ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. 27.11 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ, 20 ಲಕ್ಷ ರೂ. ಮೌಲ್ಯದ ಎರಡು ವಾಹನಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ಹಾವೇರಿಯಲ್ಲಿ ಲೋಕಾ ದಾಳಿ ವೇಳೆ 9 ಲಕ್ಷ ಹಣವನ್ನು ಗಂಟು ಕಟ್ಟಿ ಮನೆಯಿಂದ ಹೊರಗೆಸೆದ ಭ್ರಷ್ಟ ಅಧಿಕಾರಿ

Leave a Reply

Your email address will not be published. Required fields are marked *