ChatGPT Image Oct 3, 2026, 08_41_04 PM-modified
GREATER BENGALURU NEWS 9

ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಮುಗಿದ ಬಳಿಕ ಪರಪ್ಪನ ಅಗ್ರಹಾರಕ್ಕೆ ವಿನಯ್ ಕುಲಕರ್ಣಿ ಮರಳಲಿದ್ದಾರೆ.

ಒಂಬತ್ತು ವರ್ಷಗಳ ಹಿಂದೆ ಅಂದರೆ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಜಾಮೀನು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಶರಣಾಗುತ್ತಿದ್ದಂತೆಯೇ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.

ಜೂನ್ 6 ರಂದು ಸುಪ್ರೀಂ ಕೋರ್ಟ್‌ ವಿನಯ್‌ ಕುಲಕರ್ಣಿಗೆ ಜಾಮೀನು ರದ್ದುಗೊಳಿಸಿತ್ತು. ಜೊತೆಗೆ ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್​ಗೆ ಬಂದು ಶರಣಾಗಿದ್ದಾರೆ.

ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು.!

Leave a Reply

Your email address will not be published. Required fields are marked *