ChatGPT Image Oct 3, 2026, 08_41_04 PM-modified
GREATER BENGALURU NEWS 9

ಆನೇಕಲ್‌: ಅಂಗಡಿಗೆ ಹೊರಟಿದ್ದ ಯುವತಿಗೆ ಮೈ ಕೈ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮೈಲಸಂದ್ರ ಬಳಿಯಲ್ಲಿ ನಡೆದಿದೆ.

ಭಾನುವಾರ (ನಿನ್ನೆ) ಸಂಜೆ 4 ಗಂಟೆ ಸುಮಾರಿಗೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಗಾಂಜಾ ನಶೆಯಲ್ಲಿದ್ದ ಐದಾರು ಮಂದಿ ಕೃತ್ಯ ಎಸಗಿದ್ದಾರೆ. ಅಲ್ಲದೇ ಪ್ರತಿರೋಧ ತೋರಿದ ಯುವತಿ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ.

ಸಂತ್ರಸ್ತ ಯುವತಿ ದಿನಸಿ ತರಲು ಹೋಗಿದ್ದರು. ಈ ವೇಳೆ ಗಾಂಜಾ (Ganja) ನಶೆಯಲ್ಲಿದ್ದ ಕಿರಾತಕರು ಅಡ್ಡಗಟ್ಟಿ ಆಕೆಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಯುವತಿ ಪ್ರತಿರೋಧ ತೋರಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ ಕೂಡ ಮಾಡಿದ್ದಾರೆ. ಹೇಗೋ ಆಕೆ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದಾಳೆ. ಈ ವೇಳೆ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ ಕಿಡಿಗೇಡಿಗಳು ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

ಮಹಿಳೆ ಮತ್ತು ಸ್ಥಳೀಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂತ್ರಸ್ತ ಯುವತಿ ಒಂದು ವಾರದ ಹಿಂದೆಯಷ್ಟೇ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಬಾಡಿಗೆ ಮನೆಗೆ ಬಂದಿದ್ದಳು. ಅಣ್ಣ ವಾಸವಿದ್ದ ಮನೆ ಸಮೀಪದಲ್ಲೇ ಬಾಡಿಗೆ ಮನೆ ಪಡೆದು ವಾಸಿಸುತ್ತಿದ್ದಳು. ನಿನ್ನೆ ಸಂಜೆ ಒಬ್ಬಂಟಿಯಾಗಿ ಸಾಗುವಾಗ ಕಿಡಿಗೇಡಿಗಳು ನೀಚ ಕೃತ್ಯ ಎಸಗಿದ್ದಾರೆ. ಈ ಸಂಬಂಧ ನಿನ್ನೆ ಸಂಜೆಯೇ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ, ಆರೋಪಿಗಳನ್ನು ವಶಕ್ಕೆ ಪಡೆಯುವ ಕೆಲಸವನ್ನೂ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ 8 ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು!

Leave a Reply

Your email address will not be published. Required fields are marked *