ChatGPT Image Oct 3, 2026, 08_41_04 PM-modified
GREATER BENGALURU NEWS 9
Hasanamba

Greater Bengaluru News9 : ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು(ಅಕ್ಟೋಬರ್ 22) ಕೊನೆ ದಿನವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅಕ್ಟೋಬರ್​ 10 ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಅಕ್ಟೋಬರ್ 20ರವರೆಗೆ ಒಟ್ಟು 24 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇತಿಹಾಸದಲ್ಲೇ ಇದೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ ಎನ್ನುವ ದಾಖಲೆ ಸೃಷ್ಟಿಯಾಗಿದೆ. ಇಂದು ಕೊನೆ ದಿನವಾಗಿದ್ದರಿಂದ ಮುಂಜಾನೆ 6 ಗಂಟೆಯಿಂದಲೂ ಭಕ್ತರ ದಂಡು ಪ್ರವಾಹ ರೂಪದಲ್ಲಿ ಹರಿದುಬರುತ್ತಿದೆ.

Leave a Reply

Your email address will not be published. Required fields are marked *