ChatGPT Image Oct 3, 2026, 08_41_04 PM-modified
GREATER BENGALURU NEWS 9
High Court

Greater Bengaluru News9 : ಕರ್ನಾಟಕದಲ್ಲಿ ಎಸ್ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಮಹತ್ವದ ನಿರ್ಣಯಕ್ಕೆ ಹೈಕೋರ್ಟ್ ತಡೆ ನೀಡಿದೆ. ಶೈಕ್ಷಣಿಕ ಸಂಸ್ಥೆಗಳು ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಒಟ್ಟು ಮೀಸಲಾತಿಯನ್ನು ಶೇ.50ರಿಂದ ಶೇ.56ಕ್ಕೆ ಏರಿಕೆ ಮಾಡಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಕಾನೂನುಬಾಹಿರವೆಂದು ತಳ್ಳಿಹಾಕಿದೆ.

ಮಹೇಂದ್ರ ಕುಮಾರ್ ಮಿತ್ರಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಈ ತೀರ್ಪಿನಿಂದಾಗಿ ರಾಜ್ಯ ಸರ್ಕಾರದ ಹಿಂದಿನ ನಿರ್ಧಾರಕ್ಕೆ ದೊಡ್ಡ ಹಿನ್ನಡೆಯುಂಟಾಗಿದೆ.

ಈ ಹಿಂದೆ ಎಸ್‌ಸಿಗೆ ಶೇ.15 ಹಾಗೂ ಎಸ್‌ಸ್ತಿಗೆ ಶೇ.3ರಷ್ಟು ಮೀಸಲಾತಿ ಜಾರಿಯಲ್ಲಿತ್ತು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವಂತೆ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ನೀಡಿದ ವರದಿಯ ಶಿಫಾರಸಿನ ಮೇರೆಗೆ, ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿ ನಂತರ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿತ್ತು.

ಸರ್ವಪಕ್ಷಗಳ ಸಭೆಯ ಒಮ್ಮತದೊಂದಿಗೆ ಜಾರಿಗೆ ಬಂದಿದ್ದ ಈ ಮೀಸಲಾತಿ ಹೆಚ್ಚಳದ ಆದೇಶವು ಇದೀಗ ನ್ಯಾಯಾಲಯದ ವಿಚಾರಣೆಯ ಬಳಿಕ ರದ್ದಾಗಿರುವುದು ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೈಕೋರ್ಟ್‌ನ ಈ ಆದೇಶದ ಕುರಿತು ರಾಜ್ಯ ಸರ್ಕಾರ ಮುಂದಿನ ಕಾನೂನಾತ್ಮಕ ಹೆಜ್ಜೆ ಏನು ಎಂಬುದು ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *