ChatGPT Image Oct 3, 2026, 08_41_04 PM-modified
GREATER BENGALURU NEWS 9
Metro

Greater Bengaluru News9 : ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಹಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶಿಸಿದ ಪರಿಣಾಮ, ಸೋಮವಾರ ರಾತ್ರಿ ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು.

ನೇರಳೆ ಮಾರ್ಗದ ದೀಪಾಂಜಲಿನಗರ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಹಳಿಗೆ ವ್ಯಕ್ತಿಯೊಬ್ಬ ಅನಧಿಕೃತವಾಗಿ ನುಗ್ಗಿದ್ದಾನೆ.

ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ರಾತ್ರಿ 8:15 ರಿಂದ 8:30 ರವರೆಗೆ ವಿಜಯನಗರ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಡುವಿನ ಮೆಟ್ರೋ ರೈಲುಗಳ ಓಡಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಲವು ರೈಲುಗಳ ಸೇವೆಯನ್ನು ಅಲ್ಪಾವಧಿಗೆ ತಡೆಹಿಡಿಯಲಾಯಿತು.

ತಕ್ಷಣವೇ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ರಾತ್ರಿ 8:30 ರಿಂದ ನೇರಳೆ ಮಾರ್ಗದುದ್ದಕ್ಕೂ ರೈಲು ಸಂಚಾರ ಎಂದಿನಂತೆ ಸಹಜ ಸ್ಥಿತಿಗೆ ಮರಳಿದೆ.

ಘಟನೆಯಿಂದಾಗಿ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವಿಷಾದ ವ್ಯಕ್ತಪಡಿಸಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *