ChatGPT Image Oct 3, 2026, 08_41_04 PM-modified
GREATER BENGALURU NEWS 9
PG

Greater Bengaluru News9 : ನಗರದಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್‌ (PG) ವಸತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.

ನಗರದ ಒಟ್ಟು 5,480 ಪಿಜಿಗಳ ಪೈಕಿ 3,597 ಪಿಜಿಗಳು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಹೊರಬಿದ್ದಿದ್ದು, ನಿಯಮ ಉಲ್ಲಂಘಿಸಿದ ಪಿಜಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ಅನಧಿಕೃತ ಪಿಜಿಗಳಿಗೆ ಹೊಸ ನಿಯಮಗಳ ಬಿಸಿ
ಜಿಬಿಎ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, 2025ರಲ್ಲಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ ಸುತ್ತೋಲೆಯ ಅನ್ವಯ ನಿಗದಿತ ನಿಯಮಗಳನ್ನು ಪಾಲಿಸದ ಪಿಜಿಗಳಿಗೆ ವ್ಯಾಪಾರ ಪರವಾನಗಿ ನೀಡಲು ಸಾಧ್ಯವಿಲ್ಲ.

40 ಅಡಿಗಿಂತ ಕಡಿಮೆ ಅಗಲದ ರಸ್ತೆಗಳಲ್ಲಿರುವ ಪಿಜಿಗಳು, ಕಟ್ಟಡದ ಅನುಮೋದಿತ ನಕ್ಷೆಯ ನಿಯಮಗಳನ್ನು ಉಲ್ಲಂಘಿಸಿರುವ ಕಟ್ಟಡಗಳು ಹಾಗೂ ವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳು ಈ ನಿಯಮಗಳ ವ್ಯಾಪ್ತಿಗೆ ಬರುತ್ತವೆ. ಅಲ್ಲದೆ, ನೆಲಮಾಳಿಗೆಯಲ್ಲಿ ಅಡುಗೆಮನೆ ಹೊಂದಿರುವ ಪಿಜಿಗಳಿಗೂ ಪರವಾನಗಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ.

ಪಿಜಿಗಳಲ್ಲಿ ವಾಸಿಸುವವರ ಸುರಕ್ಷತೆಗೆ ಆದ್ಯತೆ
ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುವ ಪಿಜಿಗಳಿಂದ ಅಲ್ಲಿ ವಾಸಿಸುವವರ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪಿಜಿ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ಪಿಜಿಗಳ ನಡುವೆ ಕಟ್ಟಡ ಸುರಕ್ಷತೆ ಹಾಗೂ ನಿಯಮಗಳ ಪಾಲನೆಗೆ ಒತ್ತು ನೀಡಲು ಜಿಬಿಎ ಮುಂದಾಗಿದೆ. ನೋಟಿಸ್‌ಗೆ ಪಿಜಿ ಮಾಲೀಕರು ನೀಡುವ ಉತ್ತರದ ಆಧಾರದ ಮೇಲೆ ಮುಂದಿನ ಕ್ರಮದ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *