ChatGPT Image Oct 3, 2026, 08_41_04 PM-modified
GREATER BENGALURU NEWS 9
Parameshwar

Greater Bengaluru News9 : ಡಿಸಿಎಂ ಜಿ. ಪರಮೇಶ್ವರ್ ಅವರು ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪರಮೇಶ್ವರ್ ಅವರಿಗೆ ಹೃದಯಾಘಾತವಾಗಿದೆ ಎಂಬ ಪ್ರಾಥಮಿಕ ಮಾಹಿತಿಗಳು ಹೊರಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದಾರೆ.

ಸದ್ಯ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.

ಬ್ಯಾಡ್ಮಿಂಟನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ DCM ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾದಾಗ, ಜೊತೆಯಲ್ಲಿದ್ದ MLC ಗೋವಿಂದರಾಜು ಅವರು ಸಮಯಪ್ರಜ್ಞೆ ಮೆರೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ. ವಿ.ಕೆ. ಶ್ರೀನಿವಾಸ್ ಅವರು ಪರಮೇಶ್ವರ್ ಅವರ ಆರೋಗ್ಯದ ಕುರಿತು ಅಧಿಕೃತ ಮಾಹಿತಿ ನೀಡಿ ಅಭಿಮಾನಿಗಳ ಹಾಗೂ ನಾಯಕರ ಆತಂಕವನ್ನು ದೂರ ಮಾಡಿದ್ದಾರೆ.

ಡಿಸಿಎಂ ಪರಮೇಶ್ವರ್ ಅವರ ಹೃದಯ ಬಡಿತದ ಪ್ರಮಾಣ ಏಕಾಏಕಿ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಪ್ರಸ್ತುತ ಅವರ ಆರೋಗ್ಯ ಸಂಪೂರ್ಣ ನಾರ್ಮಲ್ ಆಗಿದೆ. ಇಸಿಜಿ ಸೇರಿದಂತೆ ಎಲ್ಲಾ ವೈದ್ಯಕೀಯ ಪರೀಕ್ಷಾ ವರದಿಗಳು ಸಾಮಾನ್ಯವಾಗಿದ್ದು, ಅವರು ಸ್ವತಃ ಊಟ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ಇನ್ನು ಎರಡು ಗಂಟೆಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದೂ ವೈದ್ಯರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *