ChatGPT Image Oct 3, 2026, 08_41_04 PM-modified
GREATER BENGALURU NEWS 9
Krupa Alva

Greater Bengaluru News9 : ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆಯಾಗಿದ್ದು, ಕೃಪಾ ಆಳ್ವಾ, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ಮತ್ತು ವಿಡಿಯೋ ಪೋಸ್ಟ್​ ಮಾಡಿದವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದಿದ್ದ ಉಚ್ಛಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರು ಬಂಧನದ ಭೀತಿಯಿಂದ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಪ್ರಕರಣದ ಗಂಭೀರತೆ ಹಾಗೂ ತನಿಖೆಯ ಹಂತವನ್ನು ಪರಿಗಣಿಸಿದ ನ್ಯಾಯಾಲಯದ ಪೀಠ, ಖಾಸಗಿ ವಾಹಿನಿ ಮುಖ್ಯಸ್ಥರಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಇದೇ ವೇಳೆ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿವಾದಾತ್ಮಕ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಾಲಯದ ಈ ಖಡಕ್ ಆದೇಶದಿಂದಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ (CCB) ಪೊಲೀಸರಿಗೆ ಮತ್ತಷ್ಟು ಬಲ ಬಂದಂತಾಗಿದ್ದು, ಆರೋಪಿಗಳಿಗೆ ಬಂಧನದ ತೂಗುಗತ್ತಿ ಎದುರಾಗಿದೆ.

ಇನ್ನು ಸಿಸಿಬಿ ವಿಚಾರಣೆಯಲ್ಲಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಹಲವು ಪ್ರಶ್ನೆಗಳಿಗೆ ಕೃಪಾ ಆಳ್ವಾ ಸರಿಯಾಗಿ ಉತ್ತರ ಕೊಟ್ಟಿಲ್ಲ. ಜತೆಗೆ ತಮ್ಮ ಮೊಬೈಲ್​ ಫೋನ್​ ಕೊಡುವಂತೆ ಕೇಳಿದಾಗಲೂ ಅದಕ್ಕೆ ನಕಾರ ಮಾಡಿರುವುದಾಗಿ ವರದಿಯಾಗಿದೆ. ಈಗ ಕೋರ್ಟ್​ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿರುವುದರಿಂದ ಯಾವ ಕ್ಷಣದಲ್ಲಿ ಬೇಕಾದರೂ ಅರೆಸ್ಟ್​ ಆಗುವ ಸಾಧ್ಯತೆಯಿದೆ. ಇದು ಕೇವಲ ಕೃಪಾ ಮತ್ತು ಖಾಸಗಿ ವಾಹಿನಿ ಮುಖ್ಯಸ್ಥನಿಗೆ ಮಾತ್ರವಲ್ಲ, ವಿಡಿಯೋ ಪೋಸ್ಟ್​ ಮಾಡಿದವರಿಗೂ ಈ ಭೀತಿ ಕಾಡಲಾರಂಭಿಸಿದೆ.

Leave a Reply

Your email address will not be published. Required fields are marked *