ChatGPT Image Oct 3, 2026, 08_41_04 PM-modified
GREATER BENGALURU NEWS 9

ದೆಹಲಿ: ಜುಲೈ 22ಕ್ಕೆ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿಲಿದೆ. ಹೊಸ ಸರಕಾರದ ಪೂರ್ಣ ಬಜೆಟ್ ಮಂಡನೆ ಜುಲೈ 23ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್​​​ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಈ ಬಜೆಟ್​​ ಮೇಲಿನ ಅಧಿವೇಶನ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು (ಜುಲೈ 6) ತಿಳಿಸಿದ್ದಾರೆ.

ಕಿರಣ್ ರಿಜಿಜು ಅವರು ಎಕ್ಸ್​​​ ಮೂಲಕ ಈ ಬಗ್ಗೆ ಹಂಚಿಕೊಂಡಿದ್ದಾರೆ. ಜುಲೈ 23ಕ್ಕೆ ಕೇಂದ್ರ ಬಜೆಟ್​​ ಮಂಡನೆಯಾಗಲಿದ್ದು, ಅಲ್ಲಿ ಆಗಸ್ಟ್​​ 12ರವರಗೆ ಬಜೆಟ್​​​ ಮೇಲ ಹಾಗೂ ಅನೇಕ ವಿಚಾರಗಳ ಮೇಲೆ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಭಾರತದ ಸರ್ಕಾರದ ಶಿಫಾರಸಿನ ಮೇರೆಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಜುಲೈ 22, 2024 ರಿಂದ ಆಗಸ್ಟ್ 12, 2024 ರವರೆಗೆ ಬಜೆಟ್ ಅಧಿವೇಶನ ನಡೆಸಲು ಹಾಗೂ 2024 ಗಾಗಿ ಸಂಸತ್ತಿನ ಉಭಯ ಸದನ ಕರೆಯುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ಹೇಳಿದ್ದಾರೆ. 024–25ರ ಕೇಂದ್ರ ಬಜೆಟ್ ಅನ್ನು ಜುಲೈ 23, 2024 ರಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಹಣ ಕೊಟ್ಟು ಟ್ರಾನ್ಸ್​ಫರ್​ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

Leave a Reply

Your email address will not be published. Required fields are marked *