ChatGPT Image Oct 3, 2026, 08_41_04 PM-modified
GREATER BENGALURU NEWS 9
DK Shivakumar

Greater Bengaluru News9 : ಕನ್ನಡಿಗರನ್ನು ಕಡೆಗಣಿಸಿದರೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಖಾಸಗಿ ಕಂಪನಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಕನ್ನಡದ ಉದ್ಯೋಗಿಗಳಿಗೆ ಖಾಸಗಿ ಕಂಪನಿಗಳಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ಎಕ್ಸ್‌ನಲ್ಲಿ ಅವರು ಖಡಕ್‌ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನ (Bengalurus) ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ.

ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದೆ. ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.

ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *