Greater Bengaluru News9 : ಕೆಡಿಪಿ ಸಭೆಯಲ್ಲಿ ವೇದಿಕೆ ಮೇಲೆ ಇಟ್ಟಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಯವರ ನಾಮಫಲಕವನ್ನು ಮದ್ದೂರಿನ ಕಾಂಗ್ರೆಸ್ ಶಾಸಕ ಕದಲೂರು ಉದಯ್ ತೆಗೆಸಿದ್ದಾರೆ. ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಇಂದು ಮಂಡ್ಯದಲ್ಲಿ ಕೆಡಿಪಿ ಸಭೆ ನಡೆದಿತ್ತು.
ಕುಮಾರಸ್ವಾಮಿ ಮಂಡ್ಯ ಸಂಸದರಾಗಿರುವ ಹಿನ್ನಲೆಯಲ್ಲಿ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳು ಟೇಬಲ್ ಮೇಲೆ ಅವರ ನಾಮಫಲಕ ಇಟ್ಟಿದ್ದರು. ಇದನ್ನು ಕಂಡ ಶಾಸಕ ಉದಯ್ ಯಾರೋ ಕೆಲಸಕ್ಕೆ ಬಾರದವರ ನಾಮಫಲಕ ಇಟ್ಟಿದ್ದೀರಾ ಎಂದು ಗರಂ ಆಗಿದ್ದು ನಂತರ ಅಧಿಕಾರಿಯೊಬ್ಬರು ನಾಮಫಲಕವನ್ನು ತೆಗೆದರು.
ಕಾಮಗಾರಿಗಳ ವಿಳಂಬ ಮತ್ತು ಕಳಪೆ ಗುಣಮಟ್ಟದ ವಿಚಾರವಾಗಿ ಇಂದು ಮಂಡ್ಯ ಹಾಗೂ ರಾಮನಗರ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆ ನಡೆಯಿತು. ಈ ಸಚಿವರು ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದರೆ, ರಾಮನಗರದಲ್ಲಿ ಸಚಿವ ಎಚ್.ಸಿ ಬಾಲಕೃಷ್ಣ ಹಾಗೂ ಶಾಸಕ ಇಕ್ಬಾಲ್ ಹುಸೇನ್ ಅವರು ಪಿಡಬ್ಲ್ಯೂಡಿ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಕ್ಲಾಸ್ ತೆಗೆದುಕೊಂಡರು.

