ChatGPT Image Oct 3, 2026, 08_41_04 PM-modified
GREATER BENGALURU NEWS 9
images (19)

ಬೆಂಗಳೂರು : ವಿದ್ಯುತ್ ತರ ಏರಿಸುವ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಈಗಾಗಲೇ ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಬೆಸ್ಕಾಂ ಸೇರಿದಂತೆ ರಾಜ್ಯದ ಎಸ್ಕಾಂಗಳಿಂದ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದು ಸಹಜ ಪ್ರಕ್ರಿಯೆಯಾಗಿದೆ. ಎಸ್ಕಾಂಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸುತ್ತವೆ. ಉದ್ಯಮಿಗಳು, ಸಾರ್ವಜನಿಕರು, ವ್ಯಾಪಾರಸ್ಥರು ಸೇರಿದಂತೆ ಮಧ್ಯಸ್ಥಗಾರರೊಂದಿಗೆ ಕೆಇಆರ್ಸಿ ಚರ್ಚೆ ನಡೆಸಿ ಅಂತಿಮವಾಗಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಎಲ್ಲರೊಂದಿಗೆ ಚರ್ಚಿಸಿ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. ಎಂದು ತಿಳಿಸಿದ್ದಾರೆ.

2025-26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27 ರಲ್ಲಿ ಪ್ರತಿ ಯೂನಿಟ್​ಗೆ 75 ಪೈಸೆ ಹಾಗೂ 2027-28 ರಲ್ಲಿ 91 ಪೈಸೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ.

ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆಬ್ರುವರಿಯಲ್ಲಿ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು, ತಜ್ಞರ ಸಭೆ ನಡೆಸಲಿದ್ದು, ಅಹವಾಲು ಸ್ವೀಕಾರ ಮಾಡಲಿದೆ. ಬಳಿಕ ಸಾಧಕ ಸಾಧಕ ಗಳ ಪರಿಶೀಲನೆ ಮಾಡಿ, ಪರ ವಿರೋಧಗಳ ಆಲಿಕೆ ನಂತರ ಮಾರ್ಚ್ ತಿಂಗಳಲ್ಲಿ ‌ದರ ಏರಿಕೆ ಬಗ್ಗೆ ಅಂತಿಮ ಆದೇಶ ಹೊರಡಿಸಲಿದ್ದು, ಏಪ್ರಿಲ್ 1 2025 ರಿಂದ ನೂತನ ದರ ಜಾರಿ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.

Leave a Reply

Your email address will not be published. Required fields are marked *