ChatGPT Image Oct 3, 2026, 08_41_04 PM-modified
GREATER BENGALURU NEWS 9
Lok adalat

Greater Bengaluru News9 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (NALSA) ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (KSLSA) ನಿರ್ದೇಶನದಂತೆ ಇದೇ ಡಿಸೆಂಬರ್ 12, 2026ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ್ ತಿಳಿಸಿದ್ದಾರೆ.

ಯಾವೆಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು? 
ಈ ಬಾರಿಯ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಕೌಟುಂಬಿಕ ವ್ಯಾಜ್ಯಗಳು, ಆಸ್ತಿ ಪಾಲು ವಿಭಾಗ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ ಬಾಕಿಗೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ರಾಜಿ ಮಾಡಿಕೊಳ್ಳಲು ಅವಕಾಶವಿರುವ ಎಲ್ಲಾ ಬಗೆಯ ಪ್ರಕರಣಗಳನ್ನು ಕೈಗೆತ್ತಿಕೊಂಡು ಇತ್ಯರ್ಥಪಡಿಸಲಾಗುವುದು ಎಂದು ವಿವರಿಸಿದರು.

ಕೋರ್ಟ್ ಫೀ ಮರುಪಾವತಿ ಮತ್ತು ಕಾನೂನು ಮೌಲ್ಯ: 
ಕಕ್ಷಿದಾರರ ಸಮಯ ಮತ್ತು ಹಣವನ್ನು ಉಳಿಸಿ, ಶೀಘ್ರ ನ್ಯಾಯ ಒದಗಿಸುವುದೇ ಲೋಕ ಅದಾಲತ್‌ನ ಮುಖ್ಯ ಉದ್ದೇಶವಾಗಿದೆ. ಲೋಕ ಅದಾಲತ್‌ನಲ್ಲಿ ಪ್ರಕರಣವು ರಾಜಿ ಮೂಲಕ ಇತ್ಯರ್ಥವಾದಲ್ಲಿ, ಕಕ್ಷಿದಾರರು ಈ ಹಿಂದೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು (Court Fee) ಪೂರ್ಣವಾಗಿ ಮರುಪಾವತಿಸಲಾಗುತ್ತದೆ. 

ಅಲ್ಲದೆ, ಲೋಕ ಅದಾಲತ್ ಹೊರಡಿಸುವ ಆದೇಶ ಅಥವಾ ಅವಾರ್ಡ್‌ಗೆ ಸಿವಿಲ್ ನ್ಯಾಯಾಲಯದ ತೀರ್ಪಿಗೆ ಇರುವಷ್ಟೇ ಸಮಾನವಾದ ಕಾನೂನು ಮಾನ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಹಾಗೂ ಕಕ್ಷಿದಾರರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ನ್ಯಾಯಾಧೀಶರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ ಎಂ. ಬಡಿಗೇರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *