ChatGPT Image Oct 3, 2026, 08_41_04 PM-modified
GREATER BENGALURU NEWS 9
Chicken

Greater Bengaluru News9: ಕೋಳಿ ಮಾಂಸದ ಅಂಗಡಿಗಳ ತ್ಯಾಜ್ಯ ವಿಲೇವಾರಿಗೆ ಪ್ರತಿ ಕೆಜಿಗೆ 5 ರೂ. ಶುಲ್ಕ ನಿಗದಿಪಡಿಸಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಕ್ರಮವನ್ನು ವಿರೋಧಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಬೃಹತ್ ಹೋರಾಟಕ್ಕೆ ಮುಂದಾಗಿದೆ.

ಇದರ ಭಾಗವಾಗಿ ಸೆಪ್ಟೆಂಬರ್ 3 ಮತ್ತು 4ರಂದು ಬೆಂಗಳೂರಿನ ಸಾವಿರಾರು ಚಿಕನ್ ಅಂಗಡಿಗಳನ್ನು ಬಂದ್ ಮಾಡಲು ವ್ಯಾಪಾರಿಗಳು ನಿರ್ಧರಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯ ಕೋಳಿ ಮಾಂಸದ ಅಂಗಡಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವಿಲೇವಾರಿ ಮಾಡಲು BSWML ಪ್ರತಿ ಕೆಜಿಗೆ 5 ರೂ. ಶುಲ್ಕ ನಿಗದಿಪಡಿಸಿದೆ. ಈ ನೂತನ ಶುಲ್ಕದ ವಿರುದ್ಧ ಪೌಲ್ಟ್ರಿ ಉದ್ಯಮಿಗಳು ಮತ್ತು ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಶುಲ್ಕ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಜಿಬಿಎ ನೂತನ ತ್ಯಾಜ್ಯ ವಿಲೇವಾರಿ ಶುಲ್ಕವನ್ನು ಖಂಡಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಬಂದ್‌ಗೆ ಕರೆ ನೀಡಿದೆ. ಅದರಂತೆ ಸೆಪ್ಟೆಂಬರ್ 3 ಮತ್ತು 4ರಂದು ಬೆಂಗಳೂರಿನ ಸುಮಾರು 6 ಸಾವಿರದಿಂದ 7 ಸಾವಿರದವರೆಗೆ ಕೋಳಿ ಮಾಂಸದ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಚಿಕನ್ ಖರೀದಿಸಲು ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಎರಡು ದಿನಗಳ ಕಾಲ ಅಂಗಡಿಗಳನ್ನು ಮುಚ್ಚುವ ಮೂಲಕ ನೂತನ ತ್ಯಾಜ್ಯ ವಿಲೇವಾರಿ ಶುಲ್ಕದ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಲು ಪೌಲ್ಟ್ರಿ ವ್ಯಾಪಾರಿಗಳು ಸಿದ್ಧತೆ ನಡೆಸಿದ್ದಾರೆ.

ಪ್ರತಿ ಕೆಜಿಗೆ 5 ರೂ. ಶುಲ್ಕ ನಿಗದಿಪಡಿಸಿರುವ ಕ್ರಮವನ್ನು ಹಿಂಪಡೆಯಬೇಕು ಎಂಬುದು ಪೌಲ್ಟ್ರಿ ಉದ್ಯಮಿಗಳ ಪ್ರಮುಖ ಬೇಡಿಕೆಯಾಗಿದೆ. ಈ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *