ChatGPT Image Oct 3, 2026, 08_41_04 PM-modified
GREATER BENGALURU NEWS 9
Ration Card E Kyc

Greater Bengalu News9 : ರಾಜ್ಯದ ರೇಷನ್ ಕಾರ್ಡ್ ಬಳಕೆದಾರರು ಇ-ಕೆವೈಸಿ ಪ್ರಕ್ರಿಯೆಗಾಗಿ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕರ್ನಾಟಕ ಆಹಾರ ಇಲಾಖೆಯು ‘ಅನ್ನ ಸೇವೆ’ (Anna Seve) ಎಂಬ ನೂತನ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು ಈ ನೂತನ ತಾಂತ್ರಿಕ ಆ್ಯಪ್‌ಗೆ ಚಾಲನೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಹೊಸ ವ್ಯವಸ್ಥೆಯಿಂದ ಲಾಭವೇನು?
ಮನೆಯಲ್ಲೇ ಕುಳಿತು ಇ-ಕೆವೈಸಿ: ಸ್ಮಾರ್ಟ್‌ಫೋನ್ ಹೊಂದಿರುವ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳು ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಅಲೆಯುವ ತಾಪತ್ರಯವಿಲ್ಲದೆ, ತಮ್ಮ ಮೊಬೈಲ್ ಮೂಲಕವೇ ಕುಟುಂಬದ ಸದಸ್ಯರ ಇ-ಕೆವೈಸಿ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು.

ಮುಖ ಚಹರೆ ಗುರುತು: ಹೆಬ್ಬೆರಳ ಗುರುತು (ಬೆರಳಚ್ಚು) ಮೂಡದ ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಈ ಆ್ಯಪ್‌ನಲ್ಲಿ ಫೇಸ್ ಅಥೆಂಟಿಕೇಶನ್ (Face Authentication) ತಂತ್ರಜ್ಞಾನದ ಮೂಲಕ ಮುಖದ ಚಹರೆ ಗುರುತಿಸಿ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಲಭ್ಯ
ಮೊದಲ ಹಂತದಲ್ಲಿ ಈ ಸೇವೆಯನ್ನು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಈ ಜಿಲ್ಲೆಗಳ ಸುಮಾರು 4.5 ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯಬಹುದು. ಆ ಜಿಲ್ಲೆಗಳೆಂದರೆ: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್, ಕೊಪ್ಪಳ. ಅದರಂತೆ, ಈ ಪೈಲಟ್ ಯೋಜನೆ ಯಶಸ್ವಿಯಾದ ನಂತರ ಉಳಿದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *