Greater Bengaluru News9 : 30 ಸಾವಿರ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪೊಲೀಸ್ ಕಾನ್‌ಸ್ಟೇಬಲ್‌ಗೆ ಕಲಬುರಗಿ ಕೋರ್ಟ್ ಐದು ವರ್ಷ ಜೈಲು ಹಾಗೂ 60 ಸಾವಿರ ರೂ. ದಂಡ ವಿಧಿಸಿದೆ.
2022 ರಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಭೀಮಾ ನಾಯಕ್ ಅವರು ನಿವೇಶನ ವಿವಾದ ಬಗೆಹರಿಸಲು 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಲಯ, ಭೀಮಾ ನಾಯಕ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 60 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬ್ರಹ್ಮಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಆಗಿದ್ದ ಭೀಮಾ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿ ಲೋಕಾಯುಕ್ತ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

