ChatGPT Image Oct 3, 2026, 08_41_04 PM-modified
GREATER BENGALURU NEWS 9
Road

Greater Bengaluru News9 : ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡವರಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ದೊಡ್ಡ ಶಾಕ್ ಕೊಟ್ಟಿದೆ.

ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಪಾದಚಾರಿ ಮಾರ್ಗವನ್ನು ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಿತ್ತು. ಇದೀಗ ದಂಡ ವಿಧಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಆದ್ಯತೆ, ಒತ್ತುವರಿಗಳ ವಿರುದ್ಧ ನಿರಂತರ ಕಾರ್ಯಾಚರಣೆ ಮಾಡುವುದಾಗಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಜೀವನ್ ಭೀಮಾ ನಗರ ವಾರ್ಡ್ ಪ್ರದೇಶದಲ್ಲಿ ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಡ್ಡಿಯಾಗಿದ್ದ ಪಾದಚಾರಿ ಮಾರ್ಗಗಳ ಒತ್ತುವರಿಗಳ ವಿರುದ್ಧ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ಕೈಗೊಂಡು, ನಿಯಮ ಉಲ್ಲಂಘಿಸಿದ ಮೂವರು ಒತ್ತುವರಿದಾರರಿಗೆ ಒಟ್ಟು 25,000 ರೂಪಾಯಿಗಳ ದಂಡ ವಿಧಿಸಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಗದೀಶ್.ಜಿ ಅವರು ತಿಳಿಸಿದ್ದಾರೆ.

ಪಾದಚಾರಿ ಮಾರ್ಗಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದವರ ವಿರುದ್ಧ ಸ್ಥಳದಲ್ಲೇ ಕ್ರಮ ಕೈಗೊಂಡು ದಂಡ ವಿಧಿಸಲಾಗಿದ್ದು ವಿವರಗಳು ಈ ಕೆಳಕಂಡಂತಿದೆ.

  • ಮೊದಲ ಪ್ರಕರಣದಲ್ಲಿ ಒಬ್ಬರಿಗೆ 5,000 ರೂಪಾಯಿ ದಂಡ ವಿಧಿಸಲಾಗಿದೆ.
  • ಎರಡನೇ ಪ್ರಕರಣದಲ್ಲಿ ಒಬ್ಬರಿಗೆ 10,000 ರೂಪಾಯಿ ದಂಡ ವಿಧಿಸಲಾಗಿದೆ.
  • ಮೂರನೇ ಪ್ರಕರಣದಲ್ಲಿ ಮತ್ತೊಬ್ಬರಿಗೆ 10,000 ರೂಪಾಯಿ ದಂಡ ವಿಧಿಸಲಾಗಿದೆ.
  • ಈ ಮೂಲಕ ಒಟ್ಟು ಮೂರು ಪ್ರಕರಣಗಳಲ್ಲಿ 25,000 ರೂಪಾಯಿಗಳ ದಂಡ ವಿಧಿಸಲಾಗಿದೆ.

ಇದೇ ವೇಳೆ, ಪಾದಚಾರಿ ಮಾರ್ಗಗಳು ಸಾರ್ವಜನಿಕರ ಸಂಚಾರಕ್ಕಾಗಿ ಮೀಸಲಾಗಿದ್ದು, ಅವುಗಳನ್ನು ಯಾವುದೇ ಕಾರಣಕ್ಕೂ ಅನಧಿಕೃತವಾಗಿ ಒತ್ತುವರಿ ಮಾಡಿಕೊಳ್ಳಬಾರದಂತೆ ಜಾಗೃತಿ ಮೂಡಿಸಲಾಗಿದೆ. ಸಾರ್ವಜನಿಕರಿಗೆ, ವಿಶೇಷವಾಗಿ ಹಿರಿಯ ನಾಗರಿಕರು, ಮಕ್ಕಳು ಹಾಗೂ ವಿಕಲಚೇತನರು ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಪಾದಚಾರಿ ಮಾರ್ಗಗಳನ್ನು ಪಾದಚಾರಿ ಸ್ನೇಹಿಯಾಗಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾದಚಾರಿಗಳ ಸುರಕ್ಷತೆಗೆ ವಿಶೇಷ ಆದ್ಯತೆ
ನಗರದಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಪಾದಚಾರಿ ಮಾರ್ಗಗಳು ಅತ್ಯಂತ ಅವಶ್ಯಕವಾಗಿದ್ದು, ಅವುಗಳ ಮೇಲಿನ ಅನಧಿಕೃತ ಒತ್ತುವರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗುವುದನ್ನು ತಡೆಗಟ್ಟಲು ಕೇಂದ್ರ ನಗರ ಪಾಲಿಕೆ ಕ್ರಮ ಕೈಗೊಳ್ಳುತ್ತಿದೆ. ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಮುಂದಿನ ದಿನಗಳಲ್ಲಿಯೂ ಕೇಂದ್ರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರಿಸಲಾಗುವುದು. ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುವ ಅನಧಿಕೃತ ಒತ್ತುವರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿಯಮಾನುಸಾರ ತೆರವುಗೊಳಿಸಿ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ. ಅವರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *