ChatGPT Image Oct 3, 2026, 08_41_04 PM-modified
GREATER BENGALURU NEWS 9
BMTC

Greater Bengaluru News9 : ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಬಸ್ ಚಾಲಕರು ಇನ್ಮುಂದೆ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದು, ಸೀಟ್ ಬೆಲ್ಟ್ ಧರಿಸದ ಚಾಲಕರಿಗೂ ದಂಡ ವಿಧಿಸಲಾಗುತ್ತಿದೆ.

ನಗರದ ಪ್ರಮುಖ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಎಐ ಕ್ಯಾಮೆರಾಗಳು ಹಾಗೂ ಸಂಚಾರ ಪೊಲೀಸರ ಮೂಲಕ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲಾಗುತ್ತಿದೆ. ಇದರ ಭಾಗವಾಗಿ, ಕೆಎ 57, ಎಫ್ 6558 ನೋಂದಣಿ ಸಂಖ್ಯೆಯ ಬಸ್ ಚಾಲಕನಿಗೆ ವಿಧಾನಸೌಧ ಮೆಟ್ರೋ ನಿಲ್ದಾಣದ ಬಳಿ ಸೀಟ್ ಬೆಲ್ಟ್ ಧರಿಸದ ಕಾರಣ 500 ರೂಪಾಯಿ ದಂಡ ವಿಧಿಸಲಾಗಿದೆ.

ಆದರೆ, ಹಲವು ಬಿಎಂಟಿಸಿ ಬಸ್ ಚಾಲಕರು ಸೀಟ್ ಬೆಲ್ಟ್ ಧರಿಸದೆ ಬಸ್ ಚಲಾಯಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಮತ್ತೊಂದೆಡೆ, ಕೆಲವು ಬಸ್‌ಗಳಲ್ಲಿ ಸೀಟ್ ಬೆಲ್ಟ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಮಸ್ಯೆಯೂ ಇದೆ.

ಹೀಗಾಗಿ, ಬಿಎಂಟಿಸಿ ಆಡಳಿತ ಮಂಡಳಿ ಬಸ್‌ಗಳಲ್ಲಿರುವ ಸೀಟ್ ಬೆಲ್ಟ್‌ಗಳನ್ನು ಪರಿಶೀಲಿಸಿ, ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕಿದೆ. ಇದರ ಜೊತೆಗೆ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಿ, ನಿಯಮಗಳ ಪಾಲನೆಗೆ ಒತ್ತು ನೀಡಬೇಕಿದೆ.

Leave a Reply

Your email address will not be published. Required fields are marked *