ChatGPT Image Oct 3, 2026, 08_41_04 PM-modified
GREATER BENGALURU NEWS 9
Revanna

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ ಐಟಿ ಬುಧವಾರ ಪುರುಷತ್ವ ಪರೀಕ್ಷೆಗೊಳಪಡಿಸಿದೆ.

ಪ್ರಜ್ವಲ್‌ ರೇವಣ್ಣ ಅವರ ವೀರ್ಯ, ರಕ್ತ ಮಾದರಿ ಸಂಗ್ರಹಿಸಲಾಗಿದೆ. ಅವರು ಲೈಂಗಿಕ ಕ್ರಿಯೆ ನಡೆಸುವ ಸಾಮರ್ಥ್ಯ ಖಚಿತಪಡಿಸಿಕೊಳ್ಳಲು ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆ ಆವರಣದ ಆಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ವೈದ್ಯಕೀಯ ತಪಾಸಣೆ ನಡೆದಿದೆ. ಈ ಪರೀಕ್ಷಾ ವರದಿ ಇನ್ನೊಂದು ವಾರದಲ್ಲಿ ಎಸ್‌ ಐಟಿ ಗೆ ಸಲ್ಲಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಎಸ್‌ ಐಟಿ ಅಧಿಕಾರಿಗಳು ಕೋರ್ಟ್‌ ಅನುಮತಿ ಪಡೆದು ಪ್ರಜ್ವಲ್‌ ರೇವಣ್ಣ ಅವರನ್ನು ಪರುಷತ್ವ ಪರೀಕ್ಷೆಗೆ ಒಳಪಡಿಸಿದೆ. ಇದಕ್ಕಾಗಿ ತಜ್ಞರ ತಂಡ ರಚಿಸಲಾಗಿದೆ, ಈ ತಜ್ಞರ ತಂಡ ತನ್ನ ವರದಿಯನ್ನು ಎಸ್‌ ಐಟಿಗೆ ಸಲ್ಲಿಸಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಆರೋಪಿ ಸಾಮರ್ಥ್ಯ ಹೊಂದಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಅಗತ್ಯವಾಗಿದೆ. ಈ ಕಾರಣಕ್ಕೆ ಎಸ್‌ ಐಟಿ ಅಧಿಕಾರಿಗಳು ಪುರಷತ್ವ ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ವೇಳೆ ಹವಾಮಾನ ವೈಪರಿತ್ಯದಿಂದ ಕರ್ನಾಟಕದವರು ಸೇರಿ 9 ಮಂದಿ ಸಾವು

Leave a Reply

Your email address will not be published. Required fields are marked *